ಅಭಿರುಚಿ ಸಂಸ್ಥೆಯ ಹತ್ತನೇ ವಾರ್ಷಿಕೋತ್ಸವಅಭಿರುಚಿ ಸಂಸ್ಥೆಯು ತನ್ನ ಹತ್ತನೇ ವಾರ್ಷಿಕೋತ್ಸವದ ಪ್ರಯುಕ್ತ ಕೈವಲ್ಯ ಸಾಹಿತ್ಯ ಮತ್ತು ದಾಸ ಸಾಹಿತ್ಯಗಳ ಸಮಾನತೆಯನ್ನು ಬಿಂಬಿಸುವ ವಿಶಿಷ್ಟ ಕಾರ್ಯಕ್ರಮ "ಸ್ವರವಚನ-ಕೀರ್ತನಾ ಸಾಮರಸ್ಯ" ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.ಮುಪ್ಪಿನ ಷಡಕ್ಷರಿ ಮತ್ತು ನಿಜಗುಣ ಶಿವಯೋಗಿಯವರ ರಚನೆಗಳನ್ನು ವಿದುಷಿ ಶ್ರೀಮತಿ ಸುಕನ್ಯಾ ಪ್ರಭಾಕರ್, ಮೈಸೂರು ಮತ್ತು ಕನಕ-ಪುರಂದರರ ಕೀರ್ತನೆಗಳನ್ನು ವಿದ್ವಾನ್ ಬಳ್ಳಾರಿ ರಾಘವೇಂದ್ರ, ಮೈಸೂರು ಅವರು ಹಾಡಿದರು.ಈ ಸಂಗೀತಗಾರರಿಬ್ಬರೂ ತಮ್ಮ ಸುಶ್ರಾವ್ಯ ಗಾಯನದಿಂದ ಪ್ರೇಕ್ಷಕರ ಮನತಣಿಸಿದರು.ಇಬ್ಬರು ಕಲಾವಿದರ ನಡುವೆ ಸೇತುವೆಯಂತಿದ್ದ  ಡಾ||ಎ.ಜಿ.ಗೋಪಾಲಕೃಷ್ಣಕೊಳ್ತಾಯರವರು ತಮ್ಮ ಅತ್ಯುತ್ತಮ ನಿರೂಪಣೆಯ ಮೂಲಕ  ವಚನ-ದಾಸ ಸಾಹಿತ್ಯಗಳಲ್ಲಿರುವ ಸಮಾನತೆಯನ್ನು ಸಮರ್ಥವಾಗಿ ನಿರೂಪಿಸಿದರು.
ಇದೇ ಸಂದರ್ಭದಲ್ಲಿ ಅಭಿರುಚಿ ಸಂಸ್ಥೆಯು ತನ್ನದೇ ಆದ ಅಂತರ್ಜಾಲತಾಣವನ್ನು ಬಿಡುಗಡೆಗೊಳಿಸಿತು.
ಅಧ್ಯಕ್ಷರಾದ ಡಾ|| ಶಿವರಾಮಕೃಷ್ಣ ಅವರು ಅಂತರ್ಜಾಲ ತಾಣಕ್ಕೆ ವಿದ್ಯುಕ್ತ ಚಾಲನೆ ನೀಡಿದರು.ನಮ್ಮ ಸಂಸ್ಥೆಯ ಕಾರ್ಯಕ್ರಮಗಳ ಬಗ್ಗೆ ತಿಳಿಯಲು ದಯಮಾಡಿ http://abhiruchivedike.blogspot.in/  ವಿಳಾಸಕ್ಕೆ ಭೇಟಿ ನೀಡಿ ತಮ್ಮ ಅಭಿಪ್ರಾಯವನ್ನು ತಿಳಿಸಿ.

4 ಕಾಮೆಂಟ್‌ಗಳು:

 1. ಸಮಾರಂಭದ ಶೀರ್ಷಿಕೆಯೇ ಅಮೋಘವಾಗಿದೆ.

  ಪ್ರತ್ಯುತ್ತರಅಳಿಸಿ
  ಪ್ರತ್ಯುತ್ತರಗಳು
  1. ನಿಮ್ಮ ಮಾತು ನಿಜ ಬದರಿಯವರೇ, ಕಾರ್ಯಕ್ರಮವಂತು ತುಂಬಾನೇ ಚೆನ್ನಾಗಿತ್ತು... ನಿಮ್ಮ ಹಾರೈಕೆ ಅಭಿರುಚಿಯ ಮೇಲೂ ಇರಲಿ .... ಧನ್ಯವಾದಗಳು ಸಾರ್...

   ಅಳಿಸಿ
 2. ಇಂತಹ ಘನ ಅಭಿರುಚಿಯ ಸಂಸ್ಥೆಯ ಬಗೆಗೆ ತಿಳಿದು ಖುಶಿಯಾಯಿತು. ಧನ್ಯವಾದಗಳು.

  ಪ್ರತ್ಯುತ್ತರಅಳಿಸಿ
  ಪ್ರತ್ಯುತ್ತರಗಳು
  1. ಸುನಾಥ್ ಸಾರ್ .... ನಿಮ್ಮಂಥವರ ಶುಭ ಹಾರೈಕೆ ನಮ್ಮೊಡನೆ ಇರಬೇಕು ....ಧನ್ಯವಾದಗಳು

   ಅಳಿಸಿ

ನಿಮ್ಮ ಅಮೂಲ್ಯವಾದ ಸಲಹೆ ಮತ್ತು ಅಭಿಪ್ರಾಯಗಳಿಗೆ ಸದಾ ಸ್ವಾಗತವಿದೆ.